ಉಡುಪಿ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ. : ಸಿಬ್ಬಂದಿ ತರಬೇತಿ ಕಾರ್ಯಕ್ರಮ

ಉಡುಪಿ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ. ಇದರ ಸಿಬ್ಬಂದಿಗಳಿಗೆ ಒಂದು ದಿನದ ಸಿಬ್ಬಂದಿ ತರಬೇತಿ ಕಾರ್ಯಕ್ರಮವನ್ನು ಹೊಟೇಲ್ ಮಣಿಪಾಲ್ ಇನ್ (ರಂಜಿತಾ ಪ್ಯಾಲೇಸ್) ನಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಶಿರ್ವ ಸಹಕಾರಿ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ಕುತ್ಯಾರ್ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀಮತಿ ಬಿಂದು ನಾಯರ್ (ಪ್ರೊಫೆಸರ್ – ಕರ್ನಾಟಕ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮೂಡಬಿದ್ರೆ) ಇವರು ಸಿಬ್ಬಂದಿಗಳಿಗೆ ಟೋಟಲ್ ಕ್ವಾಲಿಟಿ ಆಫ್ ಮ್ಯಾನೇಜ್ಮೆಂಟ್ ಬಗ್ಗೆ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಯೂನಿಯನ್ ನ ಕಾರ್ಯದರ್ಶಿ ಶ್ರೀಮತಿ ಅನುಷಾ ಕೋಟ್ಯಾನ್ ಹಾಗೂ ಸಿಬ್ಬಂದಿ ವರ್ಗ, ಸಂಸ್ಥೆಯ ಅಧ್ಯಕ್ಷರಾದ ಅರುಣ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಎಂ. ಗಣೇಶ್ ಕಿಣಿ, ಹಿರಿಯ ನಿರ್ದೇಶಕರಾದ ನಾರಾಯಣ ಬಲ್ಲಾಳ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಹೆಗ್ಡೆ, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Scroll to Top