Congratulations to Rajendra V Shetty – Honored by the Advisory Committee of Hubli-Dharwad Bunts Sangha

ರಾಜೇಂದ್ರ ವಿ. ಶೆಟ್ಟಿ ಅವರಿಗೆ ಅಭಿನಂದನೆಗಳ ಮಹಾಪೂರ – ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಸಲಹಾ ಸಮಿತಿಯಿಂದ ಗೌರವ

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದಲ್ಲಿ ಜೂನ್ 6ರಂದು ನಡೆದ ಪದಾಧಿಕಾರಿಗಳ ಹಾಗೂ ಸಲಹಾ ಸಮಿತಿ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಂದ್ರ ವಿ. ಶೆಟ್ಟಿಯವರನ್ನು ಸಲಹಾ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಲಹಾ ಸಮಿತಿಯ ಸದಸ್ಯರು, ರಾಜೇಂದ್ರ ವಿ. ಶೆಟ್ಟಿಯವರ ನಾಯಕತ್ವದಲ್ಲಿ ಸಂಘವು ಮತ್ತಷ್ಟು ಅಭಿವೃದ್ಧಿಯ ಪಥದಲ್ಲಿ ಸಾಗಲಿ ಹಾಗೂ ಸಮಾಜ ಸೇವೆಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲಿ ಎಂದು ಶುಭ ಹಾರೈಸಿದರು. ಸಂಘದ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳು ಇನ್ನಷ್ಟು ವಿಸ್ತಾರಗೊಂಡು ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.

Also Read: ಅನ್ನ ಪ್ರಸಾದಂ: ಹೆದ್ದಾರಿಯಲ್ಲೊಂದು ರುಚಿಯಾದ ಪಯಣ

ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸುಭಾಷ್‌ಚಂದ್ರ ಶೆಟ್ಟಿ, ಸುಗ್ಗಿ ಸುಧಾಕರ ಶೆಟ್ಟಿ, ವಿಜಯಾನಂದ ಶೆಟ್ಟಿ ಸೇರಿದಂತೆ ಪದಾಧಿಕಾರಿಗಳು, ಸಲಹಾ ಸಮಿತಿ ಸದಸ್ಯರು ಹಾಗೂ ಸಂಘದ ಗಣ್ಯರು ಉಪಸ್ಥಿತರಿದ್ದರು. ಸಭೆಯು ಪರಸ್ಪರ ಅಭಿನಂದನೆಗಳು ಮತ್ತು ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚೆಯೊಂದಿಗೆ ಯಶಸ್ವಿಯಾಗಿ ನಡೆಯಿತು.

Congratulations to Rajendra V Shetty – Honored by the Advisory Committee of Hubli-Dharwad Bunts Sangha

Leave a Comment

Your email address will not be published. Required fields are marked *

Scroll to Top