ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲಾ ಉಪಾಧ್ಯಕ್ಷೆಯಾಗಿ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಪ್ರಮುಖ ನಾಯಕಿ ಮಾಲಿನಿ ಜೆ. ಶೆಟ್ಟಿ ಅವರು ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.
ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಮಾಲಿನಿ ಜೆ. ಶೆಟ್ಟಿ ಅವರು ಈ ಹಿಂದೆ ನೀರೆ ಕಣಂಜಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆಯಾಗಿ, ಕಾರ್ಕಳ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಹಾಗೂ ಅಧ್ಯಕ್ಷೆಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.
ಅಲ್ಲದೆ, ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಅವರ ದಕ್ಷ ಕಾರ್ಯವೈಖರಿಯನ್ನು ಗುರುತಿಸಿ ಎರಡನೇ ಬಾರಿಗೆ ಜಿಲ್ಲಾ ಉಪಾಧ್ಯಕ್ಷೆಯ ಜವಾಬ್ದಾರಿಯನ್ನು ನೀಡಲಾಗಿದೆ. ಪ್ರಸ್ತುತ ಇವರು ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘ-ಸಂಸ್ಥೆಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ.


