ಉಡುಪಿ: ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾಗಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾಗಿ ಶ್ರೀ ಸುಕೇಶ್ ಶೆಟ್ಟಿ ಹೊಸಮಠ ಆಯ್ಕೆಯಾಗಿದ್ದಾರೆ.
ಸುಕೇಶ್ ಶೆಟ್ಟಿ ಹೊಸಮಠ ಅವರ ಆಯ್ಕೆಗೆ ಜಿಲ್ಲೆಯ ದೈಹಿಕ ಶಿಕ್ಷಣ ಉಪನ್ಯಾಸಕರು, ಶಿಕ್ಷಣ ಕ್ಷೇತ್ರದ ಗಣ್ಯರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ನಾಯಕತ್ವ ಗುಣ, ಸಂಘಟನಾ ಸಾಮರ್ಥ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿನ ಅನುಭವದ ಮೂಲಕ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘವನ್ನು ಮತ್ತಷ್ಟು ಬಲಪಡಿಸುವ ವಿಶ್ವಾಸ ವ್ಯಕ್ತವಾಗಿದೆ. ಅವರ ಅಧ್ಯಕ್ಷತೆಯಲ್ಲಿ ದೈಹಿಕ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೊಸ ಯೋಜನೆಗಳು, ಶಿಕ್ಷಕರ ವೃತ್ತಿಪರ ಬೆಳವಣಿಗೆಗೆ ಪೂರಕ ಕಾರ್ಯಕ್ರಮಗಳು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹಲವು ಉಪಯುಕ್ತ ಚಟುವಟಿಕೆಗಳು ನಡೆಯಲಿ ಎಂಬ ಆಶಯವನ್ನು ಸಹೋದ್ಯೋಗಿಗಳು ವ್ಯಕ್ತಪಡಿಸಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಸುಕೇಶ್ ಶೆಟ್ಟಿ ಹೊಸಮಠ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಅವರ ಮುಂದಿನ ಎಲ್ಲಾ ಕಾರ್ಯಚಟುವಟಿಕೆಗಳು ಯಶಸ್ವಿಯಾಗಿ ನೆರವೇರಲಿ ಎನ್ನುವುದು ಬಂಟ್ಸ್ ವರ್ಲ್ಡ್ ಡಾಟ್ ಕಂ ನ ಶುಭ ಹಾರೈಕೆ.


