ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಲ್ಯಾಣಪುರದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ 2026-27ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಕುಂದಾಪುರದ ಸುಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆ:
ಬಾಲಕರ 74 ಕೆ.ಜಿ. ವಿಭಾಗದಲ್ಲಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಫೈಜ್ ಸಾದಿಕ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮಹಮ್ಮದ್ ಇಬ್ರಾಹಿಂ ಸಾದಿಕ್ ಹಾಗೂ ಯಸೀರಾ ಸಾದಿಕ್ ದಂಪತಿಯ ಪುತ್ರ.
ಇನ್ನುಳಿದಂತೆ, 68 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಧನ್ವಿ, 54 ಕೆ.ಜಿ. ವಿಭಾಗದಲ್ಲಿ ಹರ್ಷಿತ್ ತೋಳಾರ್, 78 ಕೆ.ಜಿ. ವಿಭಾಗದಲ್ಲಿ ಅನೂಪ್ ಡಿ. ಗಾಣಿಗ, 62 ಕೆ.ಜಿ. ವಿಭಾಗದಲ್ಲಿ ಮಿಥೇಶ್, 60 ಕೆ.ಜಿ. ವಿಭಾಗದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ಶೆಟ್ಟಿ, 58 ಕೆ.ಜಿ. ವಿಭಾಗದಲ್ಲಿ ಪ್ರತೀಕ್ಷಾ ಪಿ. ಹಾಗೂ 66 ಕೆ.ಜಿ. ವಿಭಾಗದಲ್ಲಿ ಶುಭನ್ ಪುತ್ರನ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್ ಕುಮಾರ್ ಮತ್ತು ಲಲಿತಾ ಅನಗಲ್ಲಿ ಮಾರ್ಗದರ್ಶನ ನೀಡಿದ್ದರು.
ಜಿಲ್ಲಾ ಮಟ್ಟದ ಕರಾಟೆ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ ಅವರು ಅಭಿನಂದಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಶುಭ ಹಾರೈಸಿದ್ದಾರೆ.


