ಬಂಟರ ಸಂಘ ಬೆಂಗಳೂರು ಚುನಾವಣೆ – ಡಾ. ದೀಪಕ್ ಶೆಟ್ಟರ ವಿರುದ್ಧ ಕಾಂತಿ ಶೆಟ್ಟಿ ಕಣಕ್ಕೆ?
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸಮುದಾಯ ಸಂಸ್ಥೆಗಳಲ್ಲಿ ಒಂದಾದ ಬೆಂಗಳೂರು ಬಂಟರ ಸಂಘವು ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಸಮಾಜದ ಏಳಿಗೆಗಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಸಂಘದ ಪ್ರಸ್ತುತ ಆಡಳಿತ ಮಂಡಳಿಯ ಅವಧಿ ಮುಕ್ತಾಯಗೊಳ್ಳಲಿದ್ದು, 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಶೀಘ್ರದಲ್ಲೇ ಚುನಾವಣೆ ನಡೆಯಲಿರುವುದು ಸಂಘದ ಸದಸ್ಯರ ಗಮನ ಸೆಳೆದಿದೆ. ಈ ಬಾರಿಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಹಲವು ಘಟಾನುಘಟಿಗಳು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿರುವುದು ತಿಳಿದುಬಂದಿದೆ. ಈಗಾಗಲೇ […]





