ಚೊಚ್ಚಲ ಪ್ರಯತ್ನದಲ್ಲೇ ಸಿ.ಎ. ಫೈನಲ್ ಪಾಸ್: ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಶ್ರಾವ್ಯ ಶೆಟ್ಟಿ ಸಾಧನೆ
ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಮೇ 2026ರ ಚಾರ್ಟರ್ಡ್ ಅಕೌಂಟೆನ್ಸಿ (ಸಿ.ಎ.) ಫೈನಲ್ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲೇ ಸಿ.ಎ. ಕೋರ್ಸ್‌ನ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ ಒಂದಾದ ಸಿ.ಎ. ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿರುವ ಶ್ರಾವ್ಯ ಅವರ […]




