ಸುದ್ದಿ

Your blog category

rayara aradhana mahotsava mantralaya 75000 holige vitarane

ರಾಯರ ಆರಾಧನಾ ಮಹೋತ್ಸವಕ್ಕೆ ಭಕ್ತಿಸೇವೆಯ ಸಿಹಿಸ್ಪರ್ಶ: ಮಂತ್ರಾಲಯದಲ್ಲಿ ಸುಮಾರು 75 ಸಾವಿರ ಹೋಳಿಗೆ ವಿತರಣೆ

ಬೆಂಗಳೂರು: ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಆ. 29, 30 ಮತ್ತು 31ರಂದು ಮಂತ್ರಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಯರ ಮಧ್ಯಾರಾಧನಾ ದಿನವಾದ ಆ. 30ರಂದು ಮಂತ್ರಾಲಯಕ್ಕೆ ಆಗಮಿಸುವ ಭಕ್ತರಿಗೆ ವಿಶೇಷ ಪ್ರಸಾದವಾಗಿ ಹೋಳಿಗೆ ವಿತರಿಸುವ ಸೇವೆಯನ್ನು ಬೆಂಗಳೂರಿನ ಹೋಳಿಗೆ ಮನೆಯ ಜಯರಾಮ್ ಶೆಟ್ಟಿ ಹೆನ್ನಾಬೈಲ್, ಪ್ರಕಾಶ್ ಶೆಟ್ಟಿ ಎಡಮೊಗೆ ಹಾಗೂ ಸ್ನೇಹಿತರು ಆಯೋಜಿಸಿದ್ದಾರೆ. ಪರಮಪೂಜ್ಯ ಶ್ರೀ ಶ್ರೀ ಸುಬುದೇಂದ್ರ ತೀರ್ಥರ ಆಶೀರ್ವಾದ ಹಾಗೂ ಅನುಗ್ರಹದೊಂದಿಗೆ ಈ ವಿಶೇಷ ಸೇವೆ […]

bunt community upliftment shashidhar shetty baroda statement

ಬಂಟ ಸಮಾಜದ ತಳಮಟ್ಟದ ಜನರನ್ನು ಮೇಲಕ್ಕೆತ್ತಲು ಸಂಘಟಿತ ಪ್ರಯತ್ನ ಅಗತ್ಯ: ಶಶಿಧರ ಶೆಟ್ಟಿ ಬರೋಡ

ಮಂಗಳೂರು: ಬಂಟ ಸಮಾಜದ ತಳಮಟ್ಟದಲ್ಲಿರುವ ಜನರನ್ನು ಆರ್ಥಿಕವಾಗಿ ಮೇಲಕ್ಕೆತ್ತುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನಗಳು ನಡೆಯಬೇಕು. ಪ್ರತಿಯೊಬ್ಬ ಬಂಟರೂ ಬಿಪಿಎಲ್ ಕಾರ್ಡ್‌ನಿಂದ ಮುಕ್ತರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಬೇಕು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕ ಹಾಗೂ ಬರೋಡ ಶಶಿ ಕ್ಯಾಟರಿಂಗ್‌ನ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ ಬರೋಡ ಹೇಳಿದರು. ಬಂಟ್ಸ್ ಹಾಸ್ಟೆಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಂಟರಲ್ಲಿ ಛಲ ಮತ್ತು

sujnana pu college students health hygiene awareness program

ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಆರೋಗ್ಯ, ಸ್ವಚ್ಛತೆ ಜಾಗೃತಿ

ಕುಂದಾಪುರ, ಆಗಸ್ಟ್ 23: ವಿದ್ಯಾರ್ಥಿನಿಯರು ಶೈಕ್ಷಣಿಕ ಸಾಧನೆಯ ಜೊತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ವಿಶೇಷವಾಗಿ ಹಾಸ್ಟೆಲ್‌ನಲ್ಲಿ ವಾಸಿಸುವ ವಿದ್ಯಾರ್ಥಿನಿಯರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಕರ್ನಾಟಕ ಸರ್ಕಾರದ ಎನ್.ಆರ್.ಸಿ ವೈದ್ಯಕೀಯ ಅಧಿಕಾರಿ ಡಾ. ಧನ್ಯಾ ಎನ್. ಹೆಗ್ಡೆ ಹೇಳಿದರು. ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಲಾಗಿದ್ದ ಆರೋಗ್ಯ, ವೈಯಕ್ತಿಕ ಸ್ವಚ್ಛತೆ ಹಾಗೂ ಋತುಚಕ್ರದ ವೈಜ್ಞಾನಿಕ ನಿರ್ವಹಣಾ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ದೇಹವನ್ನು ದೇಗುಲದಂತೆ

Faiz Sadik of Sujnana PU College Kundapura selected for state-level karate

ಕುಂದಾಪುರದ ಸುಜ್ಞಾನ ಪಿಯು ಕಾಲೇಜಿನ ಫೈಜ್ ಸಾದಿಕ್ ರಾಜ್ಯ ಮಟ್ಟದ ಕರಾಟೆಗೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಲ್ಯಾಣಪುರದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ 2026-27ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಕುಂದಾಪುರದ ಸುಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆ: ಬಾಲಕರ 74 ಕೆ.ಜಿ. ವಿಭಾಗದಲ್ಲಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಫೈಜ್ ಸಾದಿಕ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮಹಮ್ಮದ್ ಇಬ್ರಾಹಿಂ ಸಾದಿಕ್

Prakash Shetty Sherdi Gainadimane has been selected as the Honorary President of the Kundapura Taluk Yuva Bunts Sangha

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ಶೇರ್ಡಿ ಗೈನಾಡಿಮನೆ ಆಯ್ಕೆ

ಕುಂದಾಪುರ: ಕ್ರೀಡೆ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ವಿವಿಧ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಸಮಾಜಸೇವಕ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಶೇರ್ಡಿ ಗೈನಾಡಿಮನೆ ಅವರು ಪ್ರತಿಷ್ಠಿತ ಕುಂದಾಪುರ ತಾಲೂಕು ಯುವ ಬಂಟರ ಸಂಘದ 2026-28ನೇ ಸಾಲಿನ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮೂಲತಃ ಕುಂದಾಪುರದವರಾದ ಪ್ರಕಾಶ್ ಶೆಟ್ಟಿ ಅವರು ಪ್ರಸ್ತುತ ದಾಂಡೇಲಿಯಲ್ಲಿ ಶ್ರೀ ದುರ್ಗಾ ಕನ್ಸ್ಟ್ರಕ್ಷನ್ ಸಂಸ್ಥೆಯ ಆಡಳಿತ ನಿರ್ದೇಶಕರಾಗಿ ಹಾಗೂ ಶ್ರೀ ದುರ್ಗಾ ಹಾರ್ಡ್‌ವೇರ್ ಮತ್ತು ಪೇಂಟ್ಸ್ ಸಂಸ್ಥೆಯ ಆಡಳಿತ ಪಾಲುದಾರರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉದ್ಯಮ

Award Presentation and Talent Recognition Programme by Kundapura Yuva Bunts Sangha

ಕುಂದಾಪುರ ಯುವ ಬಂಟರ ಸಂಘದಿಂದ ವಿವಿಧ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕುಂದಾಪುರ: 2023ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ.) ಕುಂದಾಪುರ ಇವುಗಳ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರದಾನ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು 09-08-2026 ರವಿವಾರದಂದು ಬೆಳಿಗ್ಗೆ 09:30 ರಿಂದ ಕುಂದಾಪುರದ ಬಂಟರ ಯಾನೇ ನಾಡವರ ಸಂಕೀರ್ಣದ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಲಿದ್ದು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ

sujnana educational trust national education excellence award 2026

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಗೌರವ

ನವದೆಹಲಿ : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಲಭಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ‘ಇಂಡಿಯನ್ ಹ್ಯಾಬಿಟಾಟ್ ಸೆಂಟರ್’ನಲ್ಲಿ ಮಂಗಳವಾರ ನಡೆದ ‘Education Excellence Conference & Awards–2026’ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವರಾದ ಡಾ. ಸುಕಾಂತ್ ಮಜುಂದಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಈ ಗೌರವವನ್ನು ಪ್ರದಾನ ಮಾಡಿದರು. ‘Fit India’ ಹಾಗೂ ‘School Grads’ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಈ ಸಮಾರಂಭದಲ್ಲಿ ದೇಶದ ಅತ್ಯಂತ

kundapura yuva buntara sangha pradeep shetty karikatte vidyadeevige

ಕುಂದಾಪುರ: ಯುವ ಬಂಟರ ಸಂಘದ ‘ವಿದ್ಯಾದೀವಿಗೆ’ ಯೋಜನೆ ಸಂಚಾಲಕರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಆಯ್ಕೆ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ‘ವಿದ್ಯಾದೀವಿಗೆ’ ಯೋಜನೆಗಳ ನೂತನ ಸಂಚಾಲಕರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ( Pradeep Shetty Karikatte) ಅವರು ಆಯ್ಕೆಯಾಗಿದ್ದಾರೆ. ಸಂಘಟನಾ ಚತುರರಾಗಿರುವ ಪ್ರದೀಪ್ ಶೆಟ್ಟಿ ಅವರು ಈ ಹಿಂದೆ ಉಪ್ಪುಂದ ಜೆಸಿಐ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಬೈಂದೂರು ರೋಟರಿ ಸಂಸ್ಥೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಜೊತೆಗೆ ಬೈಂದೂರು ಉತ್ಸವ, ಕುಂದಾಪುರ ಕನ್ನಡ ಪ್ರತಿಷ್ಠಾನದಂತಹ ಪ್ರಮುಖ ಕಾರ್ಯಕ್ರಮಗಳ ಸಂಯೋಜಕರಾಗಿಯೂ

Lions Club Installation Ceremony Felicitation of Achiever Students and Farmers

ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಸಾಧಕ ವಿದ್ಯಾರ್ಥಿಗಳು ಹಾಗೂ ಕೃಷಿಕರಿಗೆ ಸನ್ಮಾನ

ಕುಂಭಾಶಿ: ಜುಲೈ 22ರ ಬುಧವಾರ ಕುಂಭಾಶಿಯ ಗ್ರಾಯತ್ರಿ ಸಭಾಂಗಣದಲ್ಲಿ ನಡೆದ ಪದಪ್ರಧಾನ ಸಮಾರಂಭದಲ್ಲಿ ಪದಪ್ರದಾನ ಅಧೀಕಾರಿ MJF Ln ಹೃಷಿಕೇಶ್‌ ಹೆಗ್ಡೆ ಮತ್ತು ಜಿಲ್ಲಾ GAT ಆಫೀಸರ್ ಲಯನ್‌ ಅರುಣ್‌ ಹೆಗ್ಡೆ ಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರಾಗಿ ವಕ್ವಾಡಿ ಸಂಪತ್‌ ಕುಮಾರ್‌ ಶೆಟ್ಟಿ. ಕಾರ್ಯದರ್ಶಿಯಾಗಿ ಅರುಣ್‌ ಶೆಟ್ಟಿ ಉಳ್ತೂರು ಮತ್ತು ಖಜಾಂಚಿಯಾಗಿ ಹೆಚ್.‌ ಚಂದ್ರಕಾಂತ್‌ ಶೆಟ್ಟಿ ಮತ್ತು ಪದಾಧಿಕಾರಿಗಳ ತಂಡ ಅಧಿಕಾರ ಸ್ವೀಕರಿಸಿದರು.             ಈ ಸಂದರ್ಭದಲ್ಲಿ ವಲಯ II ರ ವಲಯಾಧ್ಯಕ್ಷರಾದ ಲಯನ್‌ ಪ್ರವೀಣ್‌ ಹೆಗ್ಡೆ

Student Parliament Formed at Vidyaranya School Judge Highlights the Importance of Leadership

ವಿದ್ಯಾರಣ್ಯ ಸ್ಕೂಲ್‌ನಲ್ಲಿ ವಿದ್ಯಾರ್ಥಿ ಸಂಸತ್ ರಚನೆ: ನಾಯಕತ್ವದ ಮಹತ್ವ ಸಾರಿದ ನ್ಯಾಯಾಧೀಶರು

ಕುಂದಾಪುರ: ನಾಯಕತ್ವ ಎಂದರೆ ಕೇವಲ ಅಧಿಕಾರ ಚಲಾಯಿಸುವುದಲ್ಲ; ಅದು ಜವಾಬ್ದಾರಿ, ಶಿಸ್ತು, ಬದ್ಧತೆ ಹಾಗೂ ಇತರರಿಗೆ ಸ್ಫೂರ್ತಿ ಮತ್ತು ಪ್ರೇರಣೆಯಾಗುವ ಗುಣ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಕ್ ಅಭಿಪ್ರಾಯಪಟ್ಟರು. ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್‌ನಲ್ಲಿ ಬುಧವಾರ ನಡೆದ ವಿದ್ಯಾರ್ಥಿ ಸಂಸತ್ ಪದಗ್ರಹಣ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ನಾಯಕತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ಶಿಸ್ತು ಮತ್ತು ಬದ್ಧತೆ ಅತ್ಯಗತ್ಯ. ವಿದ್ಯಾರ್ಥಿ

Scroll to Top