ಸುದ್ದಿ

Your blog category

Rare all-night Thalamaddale at Ravindra Kalakshetra Yakshasankranti conceptualized by Nagaraj Shetty Naikambli on July 25

ರವೀಂದ್ರ ಕಲಾಕ್ಷೇತ್ರದಲ್ಲಿ ಅಪರೂಪದ ಪೂರ್ಣರಾತ್ರಿ ತಾಳಮದ್ದಳೆ; ಜುಲೈ 25ರಂದು ನಾಗರಾಜ್ ಶೆಟ್ಟಿ ನೈಕಂಬ್ಳಿ ಸಂಯೋಜನೆಯ ‘ಯಕ್ಷಸಂಕ್ರಾಂತಿ’

ಬೆಂಗಳೂರು: ಇಂದಿನ ವೇಗದ ಜೀವನಶೈಲಿಯಲ್ಲಿ ಅಪರೂಪವಾಗುತ್ತಿರುವ ಪೂರ್ಣರಾತ್ರಿ ತಾಳಮದ್ದಳೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಸಾಕ್ಷಿಯಾಗಲಿದ್ದು, ಯಕ್ಷಗಾನಾಭಿಮಾನಿಗಳಿಗೆ ವಿಶಿಷ್ಟ ಶ್ರವಣಾನುಭವ ನೀಡಲಿದೆ. ನಾಗರಾಜ್ ಶೆಟ್ಟಿ ನೈಕಂಬ್ಳಿ ಅವರ ಸಂಯೋಜನೆಯಲ್ಲಿ ಹಾಗೂ ಬ್ರಾಹ್ಮಿ ಕ್ಯಾಟರರ್ಸ್ ಪ್ರಸ್ತುತಿಯಲ್ಲಿ ನಡೆಯುತ್ತಿರುವ ‘ಯಕ್ಷಸಂಕ್ರಾಂತಿ’ ಕಾರ್ಯಕ್ರಮದ ಮೂರನೇ ವರ್ಷದ ಸಂಭ್ರಮ ಜುಲೈ 25ರಂದು ಶನಿವಾರ ರಾತ್ರಿ 10 ಗಂಟೆಯಿಂದ ಪ್ರಾರಂಭವಾಗಿ ಬೆಳಗಿನವರೆಗೆ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ಸಮಯದ ಮಿತಿಯೊಳಗೆ ನಡೆಯುವ ತಾಳಮದ್ದಳೆಗಳ ನಡುವೆ, ಇಡೀ ರಾತ್ರಿ ನಡೆಯುವ ಅರ್ಥವೈಭವವನ್ನು ಕಲಾರಸಿಕರಿಗೆ ಪರಿಚಯಿಸುತ್ತಿರುವ ‘ಯಕ್ಷಸಂಕ್ರಾಂತಿ’ ಈಗಾಗಲೇ ತನ್ನದೇ […]

Sukesh Shetty Hosamatha elected as the new President of the Udupi District Pre-University College Physical Education Lecturers' Association.

ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾಗಿ ಸುಕೇಶ್ ಶೆಟ್ಟಿ ಹೊಸಮಠ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾಗಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾಗಿ ಶ್ರೀ ಸುಕೇಶ್ ಶೆಟ್ಟಿ ಹೊಸಮಠ ಆಯ್ಕೆಯಾಗಿದ್ದಾರೆ. ಸುಕೇಶ್ ಶೆಟ್ಟಿ ಹೊಸಮಠ ಅವರ ಆಯ್ಕೆಗೆ ಜಿಲ್ಲೆಯ ದೈಹಿಕ ಶಿಕ್ಷಣ ಉಪನ್ಯಾಸಕರು, ಶಿಕ್ಷಣ ಕ್ಷೇತ್ರದ ಗಣ್ಯರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ನಾಯಕತ್ವ ಗುಣ, ಸಂಘಟನಾ ಸಾಮರ್ಥ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿನ ಅನುಭವದ ಮೂಲಕ ಉಡುಪಿ

Car Accident Near Mantralaya Mangaluru HOPCOMS GM Ravi Shetty dies

ಮಂತ್ರಾಲಯ ಬಳಿ ಭೀಕರ ಕಾರು ಅಪಘಾತ: ಮಂಗಳೂರು ಹಾಪ್‌ಕಾಮ್ಸ್ ಜಿಎಂ ರವಿಶೆಟ್ಟಿ ದಾರುಣ ಸಾವು; ಮೂವರಿಗೆ ಗಂಭೀರ ಗಾಯ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ) ರವಿಶೆಟ್ಟಿ (43) ಅವರು ದುರಂತ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿದ್ದ ಅವರ ಮೂವರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಮಂಗಳವಾರ ನಸುಕಿನಜಾವ ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ನಡೆದಿದೆ. ಮಂಗಳೂರಿನಿಂದ ರವಿಶೆಟ್ಟಿ ಅವರು ತಮ್ಮ ಆಪ್ತ ಸ್ನೇಹಿತರೊಂದಿಗೆ ಕಾರಿನಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಮಂಗಳವಾರ ಮುಂಜಾನೆ ಮಂತ್ರಾಲಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ,

Entrepreneur Jayaprakash Shetty Saves Century-Old School Donates 20 Lakh Rupees to Government School

ಶತಮಾನದ ಸರ್ಕಾರಿ ಶಾಲೆಗೆ ಜೀವ ತುಂಬಿದ ಉದ್ಯಮಿ ಜಯಪ್ರಕಾಶ್ ಶೆಟ್ಟಿ: ₹20 ಲಕ್ಷ ದೇಣಿಗೆ

ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಹಾಗೂ ಮೂಲಸೌಕರ್ಯಗಳ ಅಭಾವದಿಂದ ಒಂದೊಂದಾಗಿ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಆದರೆ ಕುಂದಾಪುರ ತಾಲೂಕಿನ ನಂದ್ರೋಳ್ಳಿ ಗ್ರಾಮದ ಶತಮಾನ ಕಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ಹಾಗೂ ಶ್ರೀ ಕೃಷ್ಣಕೃಪಾ ಕ್ಯಾಶ್ಯೂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯಸ್ಥರಾದ ಜಯಪ್ರಕಾಶ್ ಶೆಟ್ಟಿ ಅವರು ₹20 ಲಕ್ಷ ದೇಣಿಗೆ ನೀಡುವ ಮೂಲಕ ಹೊಸ ಚೈತನ್ಯ ತುಂಬಿದ್ದಾರೆ. ಹೈಟೆಕ್ ಶಿಕ್ಷಣ ವ್ಯವಸ್ಥೆ ಮತ್ತು ಆಂಗ್ಲ ಮಾಧ್ಯಮದ ಮೇಲಿನ ಆಕರ್ಷಣೆಯಿಂದ

Historic achievement by Sujnan PU College in NEET results; secures top spot in Kundapura

ನೀಟ್ ಫಲಿತಾಂಶದಲ್ಲಿ ಸುಜ್ಞಾನ ಪಿಯು ಕಾಲೇಜು ಐತಿಹಾಸಿಕ ಸಾಧನೆ; ಕುಂದಾಪುರದಲ್ಲೇ ಅಗ್ರಸ್ಥಾನ

ಕುಂದಾಪುರ: ಇತ್ತೀಚೆಗೆ ಪ್ರಕಟಗೊಂಡ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-2026) ಫಲಿತಾಂಶದಲ್ಲಿ ಕುಂದಾಪುರದ ಸುಜ್ಞಾನ ಪಿಯು ಕಾಲೇಜು ತನ್ನ ಪ್ರಥಮ ಬ್ಯಾಚ್‌ನಲ್ಲೇ ಗಮನಾರ್ಹ ಸಾಧನೆ ಮಾಡಿದ್ದು, ಕುಂದಾಪುರ, ಬೈಂದೂರು, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕುಗಳ ಪಿಯು ಕಾಲೇಜುಗಳ ಪೈಕಿ ಅತ್ಯುತ್ತಮ ಫಲಿತಾಂಶ ದಾಖಲಿಸಿ ಅಗ್ರಸ್ಥಾನ ಪಡೆದಿದೆ. ಕೇವಲ ಎಂಟು ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡ ಈ ಶಿಕ್ಷಣ ಸಂಸ್ಥೆ ಮೊದಲ ಪ್ರಯತ್ನದಲ್ಲೇ ಅಭೂತಪೂರ್ವ ಯಶಸ್ಸು ಸಾಧಿಸಿರುವುದು ವಿಶೇಷ. ಕಾಲೇಜಿನ ವಿದ್ಯಾರ್ಥಿ ಸಮ್ಮೇದ ಪಾರೀಸ ಬೋಜ ಅವರು 720 ಅಂಕಗಳಿಗೆ

Applications invited for Kundapura Yuva Bunts Sangha scholarship schemes.

ಕುಂದಾಪುರ ಯುವ ಬಂಟರ ಸಂಘದ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾ ದೀವಿಗೆ ಯೋಜನೆಗಳಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರತಿಭಾ ಪುರಸ್ಕಾರ ಯೋಜನೆಗೆ, ಪ್ರಸ್ತುತ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 95% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ನಮೂನೆ–ಬಿ (Form-B) ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾ ದೀವಿಗೆ ಯೋಜನೆಗೆ, ಪ್ರಸ್ತುತ 10ನೇ ತರಗತಿಯಲ್ಲಿ 60% ಕ್ಕಿಂತ ಹೆಚ್ಚಿನ ಅಂಕಗಳನ್ನು

Divine Star Rishab Shettys birthday celebrations

‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಜನ್ಮದಿನದ ಸಂಭ್ರಮ

ಬೆಂಗಳೂರು: ‘ಕಾಂತಾರ’ ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿ, ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹೆಮ್ಮೆಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇಂದು (ಜುಲೈ 7) ತಮ್ಮ 43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ಯಾನ್-ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದರೂ ತಮ್ಮ ಸರಳತೆಯಿಂದಲೇ ಗುರುತಿಸಿಕೊಳ್ಳುವ ರಿಷಬ್, ಈ ಬಾರಿಯ ಜನ್ಮದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಕುಟುಂಬ ಮತ್ತು ಮಾಧ್ಯಮದವರೊಂದಿಗೆ ಸರಳ ಆಚರಣೆ ಬೆಂಗಳೂರಿನ ಕಿಂಗ್ಸ್ ಕ್ಲಬ್‌ನಲ್ಲಿ ನಡೆದ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ರಿಷಬ್ ಶೆಟ್ಟಿ ಅವರು ಮಾಧ್ಯಮ ಮಿತ್ರರನ್ನು

Valbella Celebrations at Sujnan College A Joint Step Towards Preserving Kundapura Kannada

ಸುಜ್ಞಾನ ಕಾಲೇಜಿನಲ್ಲಿ ‘ವಾಲ್ಬೆಲ್ಲ’ ಸಂಭ್ರಮ: ಕುಂದಾಪ್ರ ಕನ್ನಡ ಉಳಿವಿಗೆ ಜಂಟಿ ಹೆಜ್ಜೆ

ಕುಂದಾಪುರ: ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಭಾಷೆಯಲ್ಲ; ಅದು ನಮ್ಮ ಸಂಸ್ಕೃತಿ, ಜೀವನಶೈಲಿ ಮತ್ತು ಪರಂಪರೆಯ ಪ್ರತಿಬಿಂಬವಾಗಿದೆ. ಆಧುನಿಕ ಶಿಕ್ಷಣದ ಜೊತೆಗೆ ನಮ್ಮ ಮಣ್ಣಿನ ಭಾಷೆಯನ್ನು ಮನೆಮನೆಗಳಲ್ಲಿ ಬಳಸುವ ಮೂಲಕ ಜೀವಂತವಾಗಿರಿಸಬೇಕೆಂದು ಮಾಜಿ ಸಚಿವರು ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಪೋಷಕರಾದ ಕೆ. ಜಯಪ್ರಕಾಶ್ ಹೆಗ್ಡೆ ಕರೆ ನೀಡಿದರು. ಯಡಾಡಿ-ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಜಂಟಿ ಆಶ್ರಯದಲ್ಲಿ ವಿದ್ಯಾರಣ್ಯ ಶಾಲಾ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ

Walbella to showcase the cultural grandeur of Kundapura Kannada Invitation extended to Minister UT Khader

ಕುಂದಾಪ್ರ ಕನ್ನಡದ ಸಾಂಸ್ಕೃತಿಕ ವೈಭವ ಅನಾವರಣಕ್ಕೆ ‘ವಾಲ್ಬೆಲ್ಲ’ : ಸಚಿವ ಯು.ಟಿ. ಖಾದರ್‌ಗೆ ಆಹ್ವಾನ

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಹಾಗೂ ಯಡಾಡಿ-ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜುಲೈ 6ರಂದು ನಡೆಯಲಿರುವ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಮತ್ತು ಚಿತ್ರಕಲಾ ಸ್ಪರ್ಧೆ ‘ವಾಲ್ಬೆಲ್ಲ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರಾಜ್ಯದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ನೀಡಿ ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಮತ್ತು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಪದಾಧಿಕಾರಿಗಳು ಸಚಿವರನ್ನು ಭೇಟಿಯಾಗಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿ,

Amarnath Shetty who introduced the cashless system contests for the post of Bunts Sangha Secretary

‘ಕ್ಯಾಶ್‌ಲೆಸ್’ ವ್ಯವಸ್ಥೆ ತಂದ ಅಮರನಾಥ ಶೆಟ್ಟಿ ಬಂಟರ ಸಂಘದ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧೆ!

ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಬಂಟರ ಸಂಘದ 2026-29ನೇ ಸಾಲಿನ ಅವಧಿಯ ಚುನಾವಣಾ ಕಣ ರಂಗೇರಿದ್ದು, ಸಂಘದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಉಡುಪಿಯ ಪ್ರಸಿದ್ಧ ಶ್ರೀ ಕ್ಷೇತ್ರ ಮಂದಾರ್ತಿ ಮೂಲದ ಪ್ರಮುಖ ಸಮಾಜ ಸೇವಕ ಅಮರನಾಥ ಶೆಟ್ಟಿ ಹೆಗ್ಗುಂಜೆ ಅವರು ಅಧಿಕೃತವಾಗಿ ಸ್ಪರ್ಧಿಸಲು ಅಣಿಯಾಗಿದ್ದಾರೆ. ಸರಳತೆ ಮತ್ತು ಸಜ್ಜನಿಕೆಯ ಸಾಕಾರಮೂರ್ತಿಯಾಗಿ ಗುರುತಿಸಿಕೊಂಡಿರುವ ಇವರಿಗೆ ಬಂಟ ಸಮಾಜದಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಅಮರನಾಥ ಶೆಟ್ಟಿ ಅವರು ಈ ಹಿಂದೆ 2014 ರಿಂದ 2018ರ ಅವಧಿಯಲ್ಲಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ,

Scroll to Top