ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ವತಿಯಿಂದ ₹93.64 ಲಕ್ಷ ಮೌಲ್ಯದ ನೆರವು ವಿತರಣೆ
ಕುಂದಾಪುರ: ಪ್ರತಿಭೆ, ಸಾಮರ್ಥ್ಯ ಹಾಗೂ ಕಲಿಯುವ ಆಸಕ್ತಿ ಹೊಂದಿರುವವರಿಗೆ ಇಂದಿನ ಸಮಾಜದಲ್ಲಿ ಆರ್ಥಿಕ ಹಿನ್ನೆಲೆ ಅಡ್ಡಿಯಾಗುವುದಿಲ್ಲ. ಸಾರ್ವಜನಿಕ ಜೀವನದಲ್ಲಿ ಉತ್ತಮ ಕೆಲಸ ಮಾಡುವವರನ್ನು ಗುರುತಿಸಿ, ಗೌರವಿಸಿ, ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೋಟೇಶ್ವರದ ಯುವ ಮೆರಿಡಿಯನ್ ಗ್ರ್ಯಾಂಮಿ ಬಾಲ್‌ರೂಮ್‌ನಲ್ಲಿ ಭಾನುವಾರ ನಡೆದ ‘ಸೇವಾ ಸಂಕಲ್ಪ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಹಾಗೂ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್, ವಂಡಾರು-ಬ್ರಹ್ಮಾವರ ವತಿಯಿಂದ […]









